Close

ಪಶುಸಂಗೋಪನೆ

ಪೀಠಿಕೆ

ಪಶುಸಂಗೋಪನಾ ವಲಯವು ಕೃಷಿ ಆಧಾರಿತ ಗ್ರಾಮೀಣ ಅರ್ಥವ್ಯವಸ್ಥೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ. ಚಟುವಟಿಕೆಗಳಲ್ಲಿ ಮುಖ್ಯವಾಗಿ ಹೈನುಗಾರಿಕೆ, ಕುರಿ ಸಾಕಾಣಿಕೆ, ಮೇಕೆ ಸಾಕಾಣಿಕೆ, ಹಂದಿ ಸಾಕಾಣಿಕೆ ಮತ್ತು ಕೋಳಿ ಸಾಕಾಣಿಕೆ ಒಳಗೊಂಡಿವೆ. ಈ ಚಟುವಟಿಕೆಗಳು ನಿರ್ದಿಷ್ಠವಾಗಿ ಗ್ರಾಮೀಣ ಭಾರತದಲ್ಲಿ ಸಾಂಪ್ರದಾಯಿಕವಾಗಿದ್ದರೂ, ವೈಜ್ಞಾನಿಕ ಪ್ರಗತಿ, ಉದಾರೀಕರಣ ಮತ್ತು ಸುಧಾರಣೆಗಳ ಪ್ರಕ್ರಿಯೆಯು ಈ ವಲಯದಲ್ಲಿ ಖಾಸಗಿಯ ಸಣ್ಣ ಮತ್ತು ಬೃಹತ್ ಉದ್ಯಮದಾರರು ಬಂಡವಾಳ ಹೂಡಲು ದಾರಿಮಾಡಿಕೊಟ್ಟಿದೆ.

ದೂರದೃಷ್ಟಿ

ಜಾನುವಾರು, ಕೋಳಿ ಮತ್ತು ಮೆಲುಕು ಹಾಕುವ ಸಣ್ಣ ಪ್ರಾಣಿಗಳ ಸುಸ್ಥಿರ ಬೆಳವಣಿಗೆ ಅಥವಾ ಪೌಷ್ಠಿಕ ಭದ್ರತೆ ಮತ್ತು ಆರ್ಥಿಕ ಅಭಿವೃದ್ಧಿ.

ಗುರಿ

ಪ್ರಾಣಿ ಅನುವಂಶೀಯ ಸಂಪನ್ಮೂಲಗಳ ಸಂರಕ್ಷಣೆ ಹಾಗೂ ಅಭಿವೃದ್ಧಿ, ಮತ್ತು ತ್ವರಿತ ತಳಿವೃದ್ಧಿಗಾಗಿ ತಳಿ ಅಭಿವೃದ್ಧಿ ಕಾರ್ಯಕ್ರಮ.

ಆಡಳಿತ ವ್ಯವಸ್ಥೆ

ರಾಜ್ಯ ಮಟ್ಟದ ಆಡಳಿತ: ಆಯುಕ್ತರು, ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಇವರು ಇಲಾಖಾ ಮುಖ್ಯಸ್ಥರಾಗಿರುತ್ತಾರೆ. ನಿರ್ದೇಶಕರು, ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಇವರು ತಾಂತ್ರಿಕ ಆಡಳಿತದ ಮುಖ್ಯಸ್ಥರಾಗಿದ್ದು, ಆಯುಕ್ತರ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಾರೆ.

ಜಿಲ್ಲಾ ಮಟ್ಟದ ಆಡಳಿತ:

ಜಿಲ್ಲಾ ಮಟ್ಟದಲ್ಲಿ ಉಪ ನಿರ್ದೇಶಕರು, ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಇವರು ಆಡಳಿತ ವ್ಯವಸ್ಥೆಯ ಮುಖ್ಯಸ್ಥರಾಗಿರುತ್ತಾರೆ. ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಆಡಳಿತವು ಆಯಾ ಜಿಲ್ಲಾ ಪಂಚಾಯಿತಿಗಳ ಅಧೀನದಲ್ಲಿ ಕಾರ್ಯನಿರ್ವಹಿಸುತ್ತವೆ.

ತಾಲ್ಲೂಕು ಮಟ್ಟದ ಆಡಳಿತ:

ತಾಲ್ಲೂಕು ಮಟ್ಟದಲ್ಲಿ ಸಹಾಯಕ ನಿರ್ದೇಶಕರು, ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಇವರು ಆಡಳಿತ ವ್ಯವಸ್ಥೆಯ ಮುಖ್ಯಸ್ಥರಾಗಿರುತ್ತಾರೆ.

ಕುಂದುಕೊರತೆಗಳನ್ನು ಪರಿಣಾಮಕಾರಿಯಾಗಿ ನಿವಾರಿಸುವ ವ್ಯವಸ್ಥೆ:

ರಾಜ್ಯ ಮಟ್ಟದಲ್ಲಿ ಆಯುಕ್ತರು/ನಿರ್ದೇಶಕರು, ಜಿಲ್ಲಾ ಮಟ್ಟದಲ್ಲಿ ವಿವಿಧ ಜಿಲ್ಲೆಗಳ ಉಪ ನಿರ್ದೆಶಕರುಗಳು, ತಾಲ್ಲೂಕು ಮಟ್ಟದಲ್ಲಿ ಸಂಬಂಧಪಟ್ಟ ಸಹಾಯಕ ನಿರ್ದೇಶಕರುಗಳು ಅಥವಾ ನಿಯೋಜಿಸಲ್ಪಟ್ಟ ನೋಡಲ್ ಅಧಿಕಾರಿಗಳು ಸಾರ್ವಜನಿಕರ ಹಾಗೂ ಜಾನುವಾರು ಸಾಕಾಣಿಕೆದಾರರ ಕುಂದುಕೊರತೆಗಳನ್ನು ನಿವಾರಿಸಲು ಸೂಕ್ತ ಕ್ರಮ ವಹಿಸುತ್ತಾರೆ.

 

ದಾವಣಗೆರೆ ಜಿಲ್ಲೆಯ ರೈತರಿಗೆ ಉಚಿತವಾಗಿ ವಿತರಿಸಲಾದ ಮೇವಿನ ಬೀಜದ ಕಿರು ಪೊಟ್ಟಣಗಳ ಪ್ರಗತಿ ವರದಿ – 31/01/2024  

ದಾವಣಗೆರೆ ಜಿಲ್ಲೆಯ ರೈತರಿಗೆ ಉಚಿತವಾಗಿ ವಿತರಿಸಲಾದ ಮೇವಿನ ಬೀಜದ ಕಿರು ಪೊಟ್ಟಣಗಳ ಪ್ರಗತಿ ವರದಿ – 29/12/2023